ಹೈದರಾಬಾದ್:ಎರಡು ದಿನಗಳಿಂದ ರಕ್ತದೊತ್ತಡದ ಏರುಪೇರು ವಿಚಾರಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದ ಸೂಪರ್ಸ್ಟಾರ್ ರಜಿನಿಕಾಂತ್ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾದ ಸೂಪರ್ ಸ್ಟಾರ್ ರಜಿನಿಕಾಂತ್ - latest updates from raginikant
15:22 December 27
ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾದ ಸೂಪರ್ ಸ್ಟಾರ್ ರಜಿನಿಕಾಂತ್
ಒಂದು ವಾರದವರೆಗೆ ವಿಶ್ರಾಂತಿ ಪಡೆಯಬೇಕೆಂದು ಹಾಗೂ ಒತ್ತಡಕ್ಕೆ ಒಳಗಾಗದೇ ಸ್ವಲ್ಪ ವ್ಯಾಯಾಮ ಮಾಡುವಂತೆ ಅಪೋಲೋ ಆಸ್ಪತ್ರೆಯ ವೈದ್ಯರು ತಾವು ಹೊರಡಿಸಿದ ಅಧಿಕೃತ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಕೇರಳದ ಕಿರಿಯ ಮೇಯರ್ಗೆ ಕರೆ ಮಾಡಿ ಶುಭ ಕೋರಿದ ನಟ ಮೋಹನ್ ಲಾಲ್
ಸದ್ಯಕ್ಕೆ ಚೆನ್ನೈಗೆ ತೆರಳಲು ರಜಿನಿಕಾಂತ್ ಸಿದ್ಧತೆ ನಡೆಸುತ್ತಿದ್ದು, ಕೆಲವೇ ಗಂಟೆಗಳಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ 10 ದಿನಗಳಿಂದ ಹೈದರಾಬಾದ್ನಲ್ಲಿದ್ದ ರಜಿನಿಕಾಂತ್ 'ಅಣ್ಣಾತೆ' ಚಿತ್ರದ ಶೂಟಿಂಗ್ನಲ್ಲಿ ಭಾಗಿಯಾಗಿದ್ದರು.
ಡಿಸೆಂಬರ್ 25 ರಂದು ಇದ್ದಕ್ಕಿದ್ದಂತೆ ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು ಕೂಡಲೇ ಚಿತ್ರತಂಡ ರಜಿನಿ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಪೂರ್ಣಗೊಂಡಿದ್ದು, ರಜಿನಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.