ಚೆನ್ನೈ(ತಮಿಳುನಾಡು):ನಟ ರಜನಿಕಾಂತ್ ಅವರನ್ನು ಗುರುವಾರ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತವಾದ ಹೆಲ್ತ್ ಚೆಕ್ಅಪ್ಗಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿದ್ದಾರೆ ಎಂದು ರಜಿನಿಕಾಂತ್ ಅವರ ಪ್ರಚಾರಕ ರಿಯಾಜ್ ಕೆ ಅಹ್ಮದ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
2020ರಲ್ಲಿ, ರಜಿನಿಕಾಂತ್ಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡಿನಲ್ಲಿ ಅಸೆಂಬ್ಲಿ ಚುನಾವಣೆಯ ಮೊದಲು ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಿಲ್ಲ ಎಂದು ಘೋಷಿಸಿದ್ದರು.