ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ನ ಆದೇಶ ಪಾಲಿಸಿದ್ದು, ಮೇ 4ರಂದು ಸುಮಾರು 700 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ಪೂರೈಸಿದೆ.
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಮ್ಲಜನಕ ಪೂರೈಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.
ಕೆಲವು ದಿನಗಳ ಹಿಂದೆ ದೆಹಲಿಯಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ, ಕೇಂದ್ರ ಸರ್ಕಾರದ ಅಧಿಕಾರಿಗಳು ಹೈಕೋರ್ಟ್ ನಿರ್ದೇಶನವನ್ನು ಪಾಲನೆ ಮಾಡಿರಲಿಲ್ಲ.