ಕರ್ನಾಟಕ

karnataka

By

Published : Aug 2, 2023, 2:24 PM IST

ETV Bharat / bharat

ಮಕ್ಕಳ ಅಶ್ಲೀಲ, ಅತ್ಯಾಚಾರ ವಿಡಿಯೋ ಪ್ರಸಾರ ತಡೆಯುವ ಕ್ರಮಕ್ಕೆ ಶಹಬ್ಬಾಷ್ ಎಂದ ಸುಪ್ರೀಂ

ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳ ಹರಡುವಿಕೆಯನ್ನು ತಡೆಯುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುತಿಸಿದೆ. ಈ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಕ್ತಾಯಗೊಳಿಸಿದೆ.

supreme court closed pil filed  court closed pil filed for controlling circulation  rape videos through social media  ಅತ್ಯಾಚಾರ ವಿಡಿಯೋ ಪ್ರಸಾರ ತಡೆಯುವ ಕ್ರಮ  ವಿಡಿಯೋ ಪ್ರಸಾರ ತಡೆಯುವ ಕ್ರಮಕ್ಕೆ ಶಬ್ಬಾಷ್ ಎಂದ ಸುಪ್ರೀಂ  ಮಕ್ಕಳ ಅಶ್ಲೀಲ ಚಿತ್ರಗಳು  ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು  ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು  ವಾಟ್ಸಾಪ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮ
ಅತ್ಯಾಚಾರ ವಿಡಿಯೋ ಪ್ರಸಾರ ತಡೆಯುವ ಕ್ರಮಕ್ಕೆ ಶಬ್ಬಾಷ್ ಎಂದ ಸುಪ್ರೀಂ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿದೆ.

2015 ರಲ್ಲಿ, ವಾಟ್ಸ್​ಆ್ಯಪ್​ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ ಅಶ್ಲೀಲತೆ ಮತ್ತು ಅತ್ಯಾಚಾರದ ವಿಡಿಯೋಗಳು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ 'ಪ್ರಜ್ವಲ' ಎಂಬ ಎನ್‌ಜಿಒ ಅಂದಿನ ಸಿಜೆಐ ಎಚ್‌ಎಲ್ ದತ್ತು ಅವರಿಗೆ ಪತ್ರ ಬರೆದಿತ್ತು. ಈ ಪತ್ರದ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ಸಲ್ಲಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ಈ ಆದೇಶದಲ್ಲಿ, ವಿಡಿಯೋಗಳ ಹರಡುವಿಕೆಯನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ತಜ್ಞರ ಸಮಿತಿಯನ್ನು ಸಹ ರಚಿಸಿತ್ತು. ಆ ಸಮಿತಿಯ ಕಾರ್ಯವೈಖರಿಯನ್ನು ನ್ಯಾಯಾಲಯವು ಕಾಲಕಾಲಕ್ಕೆ ಪರಿಶೀಲಿಸುತ್ತಿತ್ತು.

ಫೇಸ್‌ಬುಕ್ ಮತ್ತು ವಾಟ್ಸ್​​ಆ್ಯಪ್​ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳು, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಮಹಾನಿರ್ದೇಶಕರು, ಸುಪ್ರೀಂ ಕೋರ್ಟ್ ನೇಮಿಸಿದ ಅಮಿಕಸ್ ಕ್ಯೂರಿ ಮತ್ತು ಇತರರು ಈ ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯು ಇತ್ತೀಚೆಗೆ ನ್ಯಾಯಾಲಯಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಇದನ್ನು ಪರಿಶೀಲಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರಿದ್ದ ವಿಭಾಗೀಯ ಪೀಠ, ಈ ವಿಶಾಲ ವಿಚಾರದಲ್ಲಿ ಒಮ್ಮತಕ್ಕೆ ಬಂದಿರುವುದಾಗಿ ಹೇಳಿದೆ.

ವಿಡಿಯೋಗಳ ಹರಡುವಿಕೆಯನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳಲ್ಲಿ ಗಮನಾರ್ಹ ಪ್ರಗತಿಯಾಗಿದೆ ಎಂದು ಅದು ಹೇಳಿದೆ. ಇದಲ್ಲದೇ, ಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದ ತಾಂತ್ರಿಕ ಅಂಶಗಳನ್ನು ಮಾತ್ರ ಪರಿಶೀಲಿಸಬೇಕಾಗಿದೆ ಮತ್ತು ಅದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿದು ಬಂದಿದೆ. ಇದಲ್ಲದೇ, ಈ ವಿಷಯವನ್ನು ನ್ಯಾಯಾಲಯವು ಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳಿದ ಪೀಠವು ಪಿಐಎಲ್ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿದೆ ಎಂದು ಹೇಳಿದೆ. ಕ್ರಮಗಳ ಅನುಷ್ಠಾನದ ನಂತರವೂ ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸೂಚಿಸಲಾಗಿದೆ.

ಓದಿ:500 ರೂಪಾಯಿಗಾಗಿ ಪತಿ ಕೊಂದ ಅಪರಾಧ.. ಮಹಿಳೆಯ ಶಿಕ್ಷೆ ಕಡಿತಗೊಳಿಸಿದ ಸುಪ್ರೀಂಕೋರ್ಟ್

ಹೈದರಾಬಾದ್​ನಲ್ಲಿ ಯುವಕನ ಬಂಧನ:ಅಮೆರಿಕದ ತನಿಖಾ ಸಂಸ್ಥೆ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇನ್ವೆಸ್ಟಿಗೇಷನ್ಸ್ (ಎಚ್‌ಎಸ್‌ಐ) ನೀಡಿದ ಮಾಹಿತಿಯ ಮೇರೆಗೆ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಯುವಕನನ್ನು ರಾಚಕೊಂಡ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈತ ಹಲವು ವರ್ಷಗಳಿಂದ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ ಮತ್ತು ಅವುಗಳನ್ನು ಇತರರೊಂದಿಗೆ ಹಂಚಿಕೊಳ್ಳುತ್ತಿರುವುದನ್ನು ಪತ್ತೆ ಹಚ್ಚಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details