ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್ಸಿಪಿ ನಾಯಕ ನವಾಬ್ ಮಲಿಕ್ಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು, ಇದರ ವಿರುದ್ಧ ಮಲಿಕ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ತಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿ ಸಲ್ಲಿಸಿ, ತುರ್ತು ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ.
ಅಕ್ರಮ ಹಣ ವರ್ಗಾವಣೆ ಕೇಸ್..ಸುಪ್ರೀಂ ಮೊರೆ ಹೋದ ಎನ್ಸಿಪಿ ನಾಯಕ ನವಾಬ್ ಮಲಿಕ್ - NCP leader Nawab Malik in the Supreme Court against his arrest
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್ಸಿಪಿ ನಾಯಕ ನವಾಬ್ ಮಲಿಕ್ಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಷನಲ್ ಕಾಂಗ್ರೆಸ್ ನಾಯಕ ನವಾಬ್ ಮಲಿಕ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿ ಫೆ.23 ರಂದು ಇಡಿ ಅಧಿಕಾರಿಗಳ ವಶವಾಗಿದ್ದರು. ನವಾಬ್ ಮಲಿಕ್ ಬಂಧನದ ವಿರುದ್ಧ ಜಾಮೀನು ಮಂಜೂರು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯ ಬಳಿಕ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಅರ್ಜಿ ತಿರಸ್ಕರಿಸಿತ್ತು. ಇದೀಗ ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ನವಾಬ್ ಮಲಿಕ್ ತುರ್ತು ವಿಚಾರಣೆ ನಡೆಸಲು ಕೋರಿದ್ದಾರೆ.
ಓದಿ:ಕಾಶ್ಮೀರದಲ್ಲಿ ಈ ವರ್ಷದ ಮೊದಲ 3 ತಿಂಗಳಲ್ಲಿ 42 ಉಗ್ರರು ಸೇರಿ 58 ಜನ ಹತ