ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಒಂದೇ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಂಡಿದೆ.
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2002 ರ ಗಲಭೆಯ ಸಂದರ್ಭದಲ್ಲಿ, ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅವರ ಕುಟುಂಬ ಸದಸ್ಯರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಅಪರಾಧಿಗಳು 15 ವರ್ಷಗಳ ಜೈಲುವಾಸದ ನಂತರ ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿತ್ತು.
ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಗೆ ಅನುಗುಣವಾಗಿ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಹೇಳಿದೆ. ಈ ವರ್ಷ ಆಗಸ್ಟ್ 15 ರಂದು ಈ ಅಪರಾಧಿಗಳು ಗೋಧ್ರಾ ಉಪ ಜೈಲಿನಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ ನಂತರ ಬಿಡುಗಡೆ ಮಾಡಲಾಗಿದೆ.