ಕರ್ನಾಟಕ

karnataka

ETV Bharat / bharat

ಲಖೀಂಪುರ ಘಟನೆ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ - ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ

ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ.ಸೂರ್ಯಕಾಂತ್​, ನ್ಯಾ.ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ 'ಉತ್ತರಪ್ರದೇಶ ಪೊಲೀಸರು ನಡೆಸುತ್ತಿರುವ ತನಿಖೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

supreme court
ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

By

Published : Nov 8, 2021, 3:40 PM IST

ನವದೆಹಲಿ:ಉತ್ತರ ಪ್ರದೇಶದ ಲಖೀಂಪುರದಲ್ಲಿ ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್​ ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡುವಂತೆ ಸುಪ್ರೀಂಕೋರ್ಟ್​ ಯುಪಿ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ.

ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ.ಸೂರ್ಯಕಾಂತ್​, ನ್ಯಾ.ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ 'ಉತ್ತರಪ್ರದೇಶ ಪೊಲೀಸರು ನಡೆಸುತ್ತಿರುವ ತನಿಖೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಕರಣದ ತನಿಖೆಯ ಮೇಲುಸ್ತುವಾರಿ ವಹಿಸಲು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ಯಾಕೆ ನೇಮಿಸಬಾರದು ಎಂದು ಉತ್ತರಪ್ರದೇಶ ಸರ್ಕಾರವನ್ನು ಪ್ರತಿನಿಧಿಸುವ ವಕೀಲರಾದ ಹರೀಶ್​ ಸಾಳ್ವೆ ಮತ್ತು ಗರೀಮಾ ಪ್ರಸಾದ್​ ಅವರನ್ನು ಪ್ರಶ್ನಿಸಿದೆ.

ಅಲ್ಲದೇ, ಪ್ರಕರಣದ ಕುರಿತು ಅಂತಿಮ ವರದಿ ಸಲ್ಲಿಸುವವರೆಗೆ ಪಂಜಾಬ್​ ಮತ್ತು ಹರಿಯಾಣದ ನ್ಯಾಯಮೂರ್ತಿಗಳಾದ ರಾಕೇಶ್​ಕುಮಾರ್ ಜೈನ್​ ಮತ್ತು ರಂಜಿತ್​ ಸಿಂಗ್​ ಅವರನ್ನು ಮೇಲುಸ್ತುವಾರಿಗಳನ್ನಾಗಿ ನೇಮಿಸಿ ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ. ಅಲ್ಲದೇ, ಈ ಬಗ್ಗೆ ಶುಕ್ರವಾರದೊಳಗೆ ವರದಿ ನೀಡಬೇಕು ಎಂದಿದೆ.

ಇದಕ್ಕೂ ಮುನ್ನ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಿತ್ತು. ನ್ಯಾಯಾಲಯದ ಮುಂದೆ ಇತರೆ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಬೇಕು ಮತ್ತು ತಜ್ಱರಿಂದ ಡಿಜಿಟಲ್​ ಪುರಾವೆಗಳ ಪರಿಶೀಲನೆ ಕಾರ್ಯ ತ್ವರಿತಗೊಳಿಸುವಂತೆ ಆದೇಶಿಸಿದೆ.

ABOUT THE AUTHOR

...view details