ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳೆಂದರೆ ಮುಸ್ಲಿಂ ಸಮುದಾಯದ ಜೊತೆಗೆ ಸಿಖ್, ಜೈನ್, ಕ್ರೈಸ್ತ, ಬೌದ್ಧ ಸಮುದಾಯಗಳೂ ಕೂಡಾ ಬರುತ್ತವೆ. ಆದರೆ.. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸುಪ್ರೀಂಕೋರ್ಟ್ಗೆ ಸಲ್ಲಿಕೆ ಮಾಡಲಾದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ವಿಚಾರದಲ್ಲಿ ಮೊದಲಿನಿಂದಲೂ ಮತ್ತು ಇಲ್ಲಿಯವರೆಗೆ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನೇಮಕ ಮಾಡಲಾಗುತ್ತಿದೆ. ಬೇರೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಆರೋಪಿಸಿ, ಅನಿಲ್ ಆ್ಯಂಟನಿ ಎಂಬುವವರು ಸುಪ್ರೀಂಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು.