ಕರ್ನಾಟಕ

karnataka

ETV Bharat / bharat

ನೋಟಾಕ್ಕೆ ಹೆಚ್ಚು ಮತ ಬಿದ್ದರೆ ಚುನಾವಣೆ ರದ್ದು; ಕೇಂದ್ರಕ್ಕೆ ಸುಪ್ರೀಂ ನೋಟಿಸ್​ - ಅಭ್ಯರ್ಥಿಗಳಿಗಿಂತ ನೋಟಾಕ್ಕೆ ಹೆಚ್ಚು ಮತ ಬಿದ್ದರೆ ಚುನಾವಣೆ ರದ್ದು

ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರಿಂ ಕೋರ್ಟ್​ನಲ್ಲಿ ನಡೆಯಿತು.

ಅಭ್ಯರ್ಥಿಗಳಿಗಿಂತ ನೋಟಾಕ್ಕೆ ಹೆಚ್ಚು ಮತ ಬಿದ್ದರೆ ಚುನಾವಣೆ ರದ್ದು, ಕೇಂದ್ರಕ್ಕೆ ಸುಪ್ರೀಂ ನೋಟಿಸ್​
ಅಭ್ಯರ್ಥಿಗಳಿಗಿಂತ ನೋಟಾಕ್ಕೆ ಹೆಚ್ಚು ಮತ ಬಿದ್ದರೆ ಚುನಾವಣೆ ರದ್ದು, ಕೇಂದ್ರಕ್ಕೆ ಸುಪ್ರೀಂ ನೋಟಿಸ್​

By

Published : Mar 15, 2021, 1:58 PM IST

ನವದೆಹಲಿ:ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸುವ ವಿಚಾರವಾಗಿ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್​, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರಿಂ ಕೋರ್ಟ್​ನಲ್ಲಿ ನಡೆಯಿತು. ಈ ಕುರಿತು ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ ನೀಡಿದೆ.

ಒಂದು ಚುನಾವಣೆಯನ್ನು ಉಲ್ಲೇಖಿಸಿ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದರು. ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿದ್ದರು.

ಬಳಿಕ ಆ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು. ಈ ಸಂದರ್ಭದಲ್ಲಿ ಮೊದಲು ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮರುಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

For All Latest Updates

TAGGED:

ABOUT THE AUTHOR

...view details