ಕರ್ನಾಟಕ

karnataka

ಬಿಬಿಸಿ ಸಾಕ್ಷ್ಯಚಿತ್ರ ಪ್ರಕರಣ: ಕೇಂದ್ರ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದ ಸುಪ್ರೀಂ

By

Published : Feb 3, 2023, 1:17 PM IST

2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮೂಲ ದಾಖಲೆಗಳನ್ನು ಸಲ್ಲಿಸುವಂತೆ ಹೇಳಿದರು. ಇದಕ್ಕಾಗಿ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್‌ನಲ್ಲಿ ನಡೆಯಲಿದೆ.

Supreme Court issues notice to the Centre  Court issues notice to the Centre BBC documentary  BBC documentary case  BBC documentary issue  ಬಿಬಿಸಿ ಸಾಕ್ಷ್ಯಚಿತ್ರ ಪ್ರಕರಣ  ಕೇಂದ್ರ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದ ಸುಪ್ರೀಂ  2002ರ ಗುಜರಾತ್ ಗಲಭೆ  ಬಿಬಿಸಿಯ ಸಾಕ್ಷ್ಯಚಿತ್ರದ ಸಾಮಾಜಿಕ ಮಾಧ್ಯಮ ಲಿಂಕ್‌  ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ
ಕೇಂದ್ರ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದ ಸುಪ್ರೀಂ

ನವದೆಹಲಿ: 2002ರ ಗುಜರಾತ್ ಗಲಭೆ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ನಿಷೇಧಿಸುವ ಆದೇಶದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮೂರು ವಾರಗಳಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್‌ನಲ್ಲಿ ನಡೆಯಲಿದೆ.

ಓದಿ:ಮನೋನ್ಮಣಿ ವಿವಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಆರೋಪ: ಎಬಿವಿಪಿ ದೂರು

ಏನಿದು ಪ್ರಕರಣ:2002ರ ಗುಜರಾತ್ ಗಲಭೆ ಕುರಿತು ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿತ್ತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಕೀಲ ಎಂ ಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿಯು ಸಿಂಗ್ ಅವರು ಈ ವಿಷಯದ ಕುರಿತು ತಮ್ಮ ಪ್ರತ್ಯೇಕ ಪಿಐಎಲ್‌ಗಳನ್ನು ತುರ್ತು ಪಟ್ಟಿ ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಗಳನ್ನು ಗಣನೆಗೆ ತೆಗೆದುಕೊಂಡಿತು.

ಫೆಬ್ರವರಿ 6 ರಂದು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿತ್ತು. ಆದರೆ, ಈ ಪ್ರಕರಣ ವಿಚಾರಣೆ ಇಂದು ಮುಕ್ತಾಯವಾಗಿದ್ದು, ಸುಪ್ರೀಂ ಕೆಲವೊಂದು ದಾಖಲೆಗಳನ್ನು ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ. ವಿಚಾರಣೆಯ ಆರಂಭದಲ್ಲಿ, ವೈಯಕ್ತಿಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ ಶರ್ಮಾ ತಮ್ಮ ಮನವಿಯನ್ನು ಪ್ರಸ್ತಾಪಿಸಿ, ಜನರನ್ನು ಬಂಧಿಸಲಾಗುತ್ತಿದೆ ಎಂದು ಹೇಳಿದರು. ಇದನ್ನು ಪಟ್ಟಿ ಮಾಡಲಾಗುವುದು ಎಂದು ಸಿಜೆಐ ತಿಳಿಸಿದರು. ಹಿರಿಯ ಪತ್ರಕರ್ತ ಎನ್ ರಾಮ್ ಮತ್ತು ಹೋರಾಟಗಾರ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ ಪ್ರತ್ಯೇಕ ಅರ್ಜಿಗಳ ಬಗ್ಗೆ ಹಿರಿಯ ವಕೀಲ ಸಿ ಯು ಸಿಂಗ್ ಪ್ರಸ್ತಾಪಿಸಿದರು.

ಟ್ವೀಟ್​ ಡಿಲೀಟ್​ ಮಾಡಿರುವ ಬಗ್ಗೆ ಪ್ರಸ್ತಾಪ:ತುರ್ತು ಅಧಿಕಾರವನ್ನು ಬಳಸಿಕೊಂಡು ರಾಮ್ ಮತ್ತು ಭೂಷಣ್ ಮಾಡಿದ ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವ ಬಗ್ಗೆ ವಕೀಲ ಸಿ ಯು ಸಿಂಗ್ ಉಲ್ಲೇಖಿಸಿದರು. ಬಿಬಿಸಿ ಸಾಕ್ಷ್ಯಚಿತ್ರ ಸ್ಟ್ರೀಮಿಂಗ್ ಮಾಡಿದ್ದಕ್ಕಾಗಿ ಅಜ್ಮೀರ್‌ನ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಅವರು ಹೇಳಿದರು. ಇದರ ನಂತರ ಅರ್ಜಿ ವಿಚಾರಣೆಯನ್ನು ನಾವು ಪಟ್ಟಿ ಮಾಡುತ್ತೇವೆ ಎಂದು ಸಿಜೆಐ ಹೇಳಿದರು. ಸಾಕ್ಷ್ಯಚಿತ್ರ ನಿರ್ಬಂಧಿಸುವ ಕೇಂದ್ರದ ನಿರ್ಧಾರದ ವಿರುದ್ಧ ವಕೀಲ ಶರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರದ ಭಾಗ 1 ಮತ್ತು ಭಾಗ 2 ಇವುಗಳನ್ನು ಸುಪ್ರೀಂಕೋರ್ಟ್ ತರಿಸಿಕೊಂಡು ಪರಿಶೀಲಿಸಬೇಕೆಂದು ಮತ್ತು 2002ರ ಗುಜರಾತ್ ಗಲಭೆಯಲ್ಲಿ ನೇರವಾಗಿ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.

ಸಾಕ್ಷ್ಯ ಚಿತ್ರದ ಬಗ್ಗೆ ದೇಶದಲ್ಲಿ ವ್ಯಾಪಕ ಆಕ್ರೋಶ:ಬ್ರಿಟನ್​ನ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) 2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಪಿಎಂ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯ ಆಡಳಿತವನ್ನು ಗುರಿಯಾಗಿಸಿಕೊಂಡು ಎರಡು ಭಾಗಗಳ ವಿಡಿಯೊ ಸರಣಿಯನ್ನು ಪ್ರಸಾರ ಮಾಡಿತ್ತು. ಸಾಕ್ಷ್ಯಚಿತ್ರದ ಬಗ್ಗೆ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಇದನ್ನು ಇಂಟರ್ನೆಟ್​​ನಿಂದ ತೆಗೆದುಹಾಕಲು ಕೇಂದ್ರ ಸರ್ಕಾರ ಆದೇಶಿಸಿತ್ತು.

ABOUT THE AUTHOR

...view details