ನವದೆಹಲಿ:ಕೊರೊನಾ ವೈರಸ್ನ ಎರಡನೇ ಹಂತದ ಅಲೆ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಇದೀಗ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೂ ಸೋಂಕು ದೃಢಪಟ್ಟಿದೆ.
ಇದಕ್ಕೆ ಸಂಬಂಧಿಸಿದಂತೆ ಬಾರ್ & ಬೆಂಚ್ ಮಾಹಿತಿ ನೀಡಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ನೀಡಿದೆ.
ಇದನ್ನೂ ಓದಿ: ಕೋವಿಡ್ ನಿಯಮ ಗಾಳಿಗೆ ತೂರಿ, ಕೈಲಾಸ ಯಾತ್ರೆಯಲ್ಲಿ ನೂರಾರು ಮಹಿಳೆಯರು ಭಾಗಿ
ದೇಶದಲ್ಲಿ ಉಂಟಾಗಿರುವ ಕೋವಿಡ್ ಬಿಕ್ಕಟ್ಟಿನ ಸಮಸ್ಯೆಗಳನ್ನ ನ್ಯಾ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಇದೀಗ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ವಿಚಾರಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಕಳೆದ ಏಪ್ರಿಲ್ ತಿಂಗಳಲ್ಲೂ ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ವಕ್ಕರಿಸಿತ್ತು. ಕೆಲ ದಿನಗಳ ನಂತರ ಅವರು ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ.