ನವದೆಹಲಿ:ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುತ್ತೇವೆ. ಕೋರ್ಟ್ ನಾಗರಿಕರ ಮೂಲಭೂತ ಹಕ್ಕುಗಳನ್ನು ಗೌರವಿಸಲಿದೆ. ಆದ್ರೆ, ತಕ್ಷಣಕ್ಕೆ ಅರ್ಜಿಗಳ ತುರ್ತುವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.
ವಿವರ:
ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಪ್ರಕರಣ ಇತ್ಯರ್ಥ ಆಗುವವರೆಗೆ ಧರಿಸುವುದು ಬೇಡ ಎಂದು ಹಿಜಾಬ್ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಿನ್ನೆ ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್‌ನ ಈ ನಿಲುವು ಪ್ರಶ್ನಿಸಿ ಪ್ರಕರಣದ ತುರ್ತು ವಿಚಾರಣೆಗೆ ಒತ್ತಾಯಿಸಿ ಇಂದು ದೂರುದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರ ಜೊತೆಗೆ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುವುದಾಗಿಯೂ ತಿಳಿಸಿದೆ.
ಇದನ್ನೂಓದಿ:ನೋಡಿ: ಮೊಘಲ್ ಗಾರ್ಡನ್ ಫೆಬ್ರವರಿ 12ರಿಂದ ಸಾರ್ವಜನಿಕರಿಗೆ ಮುಕ್ತ