ನವದೆಹಲಿ:ಇಸ್ರೇಲ್ ಮೂಲದ ಸ್ಪೈವೇರ್ ಸಾಫ್ಟ್ವೇರ್ ಪೆಗಾಸಸ್ ಬಳಸಿಕೊಂಡುಪ್ರತಿಪಕ್ಷ ನಾಯಕರು, ಪತ್ರಕರ್ತರು ಸೇರಿದಂತೆ ಪ್ರಮುಖ ವ್ಯಕ್ತಿಗಳ ಮೇಲೆ ಗೂಡಚರ್ಯೆ ನಡೆಸಲಾಗಿದೆ ಎನ್ನಲಾದ ಪ್ರಕರಣದ ವಿಶೇಷ ತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಒಟ್ಟಾಗಿ ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಗೂಢಚರ್ಯೆ ನಡೆಸಲು ಪೆಗಾಸಸ್ ಸ್ಪೈವೇರ್ಗೆ ಅನುಮತಿ ನೀಡಲಾಗಿದೆಯೇ ಎಂಬುವುದನ್ನು ತಿಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿ ಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂ.ಎಲ್ ಶರ್ಮಾ ಅರ್ಜಿ ಸಲ್ಲಿಸಿದ್ದರು.
ಇದನ್ನೂಓದಿ: Pegasus: ಸಾಫ್ಟ್ವೇರ್ ದುರ್ಬಳಕೆ ಆರೋಪದ ಬೆನ್ನಲ್ಲೆ ಕೆಲ ಬಳಕೆದಾರರ ನಿರ್ಬಂಧಿಸಿದ NSO: ವರದಿ