ನವದೆಹಲಿ:ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ನವೆಂಬರ್ 11 ರಂದು ಮಧ್ಯಂತರ ಜಾಮೀನು ನೀಡಿದ್ದಕ್ಕೆ ಸುಪ್ರೀಂ ಕೋರ್ಟ್ ಕಾರಣಗಳನ್ನು ನೀಡಿದೆ.
ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ವಿಚಾರ: ಕಾರಣ ನೀಡಿದ ಸುಪ್ರೀಂ - ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಕಾರಣಗಳು
ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ವಿವರವಾದ ಕಾರಣಗಳನ್ನು ಸುಪ್ರೀಂಕೋರ್ಟ್ ನೀಡಿದೆ. ಹಾಗೆಯೇ ಮಹಾರಾಷ್ಟ್ರ ಪೊಲೀಸರ ಪ್ರಾಥಮಿಕ ತನಿಖಾ ವರದಿ ಅರ್ನಬ್ ಅಪರಾಧಿ ಎಂಬುದನ್ನು ಸಾಬೀತುಪಡಿಸುವುದಿಲ್ಲ ಎಂದು ತಿಳಿಸಿದೆ.
ಪತ್ರಕರ್ತ ಅರ್ನಬ್ ಗೋಸ್ವಾಮಿ
ಮಹಾರಾಷ್ಟ್ರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ಪ್ರಾಥಮಿಕ ಮುಖ ಮೌಲ್ಯಮಾಪನವು ಅರ್ನಬ್ ವಿರುದ್ಧದ ಎತ್ತಿಹಿಡಿಯುವುದಿಲ್ಲ. ಹೀಗಾಗಿ ಅವರಿಗೆ ಮಧ್ಯಂತರ ಬೇಲ್ ನೀಡಲಾಗಿದೆ ಎಂದು ಸುಪ್ರೀಂ ಹೇಳಿದೆ.
2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಇವರಿಗೆ ಸುಪ್ರೀಂ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.