ಸೂರತ್(ಗುಜರಾತ್):ವಜ್ರ ವ್ಯಾಪಾರಿ ಸಾವ್ಜಿ ಧೋಲಾಕಿಯಾ ಅವರು ಟೋಕಿಯೋ ಒಲಿಂಪಿಕ್ನಲ್ಲಿ ಭಾಗವಹಿಸಿರುವ ಭಾರತೀಯ ಮಹಿಳೆಯರ ಹಾಕಿ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಫೈನಲ್ನಲ್ಲಿ ಗೆಲುವು ಸಾಧಿಸಿದರೆ ತಂಡದ ಪ್ರತಿ ಸದಸ್ಯರಿಗೆ ಮನೆ ಕಟ್ಟಲು 11 ಲಕ್ಷ ರೂಪಾಯಿ ಹಣಕಾಸು ನೆರವು ಅಥವಾ ಕಾರು ನೀಡುವುದಾಗಿ ಅವರು ಘೋಷಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಾವ್ಜಿ ಧೋಲಾಕಿಯಾ, ಆಟಗಾರರ ಮನೋಸ್ಥೈರ್ಯ ಹೆಚ್ಚಿಸಲು ಈ ಬಹುಮಾನ ಘೋಷಿಸಿದ್ದಾಗಿ ಹೇಳಿದ್ದಾರೆ.