ನಾಗ್ಪುರ್:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ತನ್ನ ಪ್ಲೇಯಿಂಗ್ -11 ರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಕೆಎಸ್ ಭರತ್ ಅವರನ್ನು ಸೇರಿಸಿದೆ. ಈ ಟೆಸ್ಟ್‌ನಲ್ಲಿ ಈ ಇಬ್ಬರೂ ಆಟಗಾರರನ್ನು ಕಣಕ್ಕಿಳಿಸಲು ತಂಡದ ನಾಯಕ ರೋಹಿತ್ ಶರ್ಮಾ ನಿರ್ಧರಿಸಿದ್ದರು. ಏತನ್ಮಧ್ಯೆ ಪಂದ್ಯ ಆರಂಭದ ಮುನ್ನ ಸೂರ್ಯ ಮತ್ತು ಕೆಎಸ್ ಭರತ್ ಅವರಿಗೆ ಮೈದಾನದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಕ್ಯಾಪ್ ಅನ್ನು ಹಸ್ತಾಂತರಿಸಲಾಯಿತು. ಮಾಜಿ ಕ್ರಿಕೆಟಿಗ ಮತ್ತು ಭಾರತ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಸೂರ್ಯಕುಮಾರ್ ಯಾದವ್ ಅವರಿಗೆ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದರು.
ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಆಟವಾಡಿದ ನಂತರ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದರು. ಆದರೆ, ಟೆಸ್ಟ್ ಕ್ರಿಕೆಟ್ ಆಡಬೇಕಾದರೆ ಅವರು ಬಹಳ ಸಮಯ ಕಾಯಬೇಕಾಯಿತು. ಆದರೆ, ಈಗ ಅಂತಿಮವಾಗಿ ಅವರು ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಂದ ಟೆಸ್ಟ್ ಕ್ಯಾಪ್ ಪಡೆದರು. ಈ ಸಂದರ್ಭದಲ್ಲಿ ಸೂರ್ಯಕುಮಾರ್ ಅವರ ಭಾವಾಭಿನಯಗಳು ಗಮನ ಸೆಳೆಯುವಂತಿದ್ದವು.
ಸೂರ್ಯಕುಮಾರ್ ಜೊತೆಗೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ಕೂಡ ಟೆಸ್ಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನಾಗ್ಪುರ ಟೆಸ್ಟ್‌ಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್-11 ರಲ್ಲೂ ಅವರು ಸ್ಥಾನ ಪಡೆದಿದ್ದಾರೆ. ಅದೇ ಸಮಯದಲ್ಲಿ ಚೇತೇಶ್ವರ ಪೂಜಾರ ಅವರು ಟೆಸ್ಟ್ ಚೊಚ್ಚಲ ಪಂದ್ಯಕ್ಕಾಗಿ ಕೆಎಸ್ ಭರತ್ ಅವರಿಗೆ ಕ್ಯಾಪ್ ಅನ್ನು ಹಸ್ತಾಂತರಿಸಿದರು. ಇನ್ನು ಆಸ್ಟ್ರೇಲಿಯ ತಂಡದ ಬಗ್ಗೆ ನೋಡುವುದಾದರೆ ನಾಯಕ ಪ್ಯಾಟ್ ಕಮಿನ್ಸ್ ಅವರು ನಾಗ್ಪುರ ಟೆಸ್ಟ್‌ಗಾಗಿ ಆಫ್ ಸ್ಪಿನ್ನರ್ ಟಾಡ್ ಮರ್ಫಿ ಅವರನ್ನು ಪ್ಲೇಯಿಂಗ್ -11 ನಲ್ಲಿ ಸೇರಿಸಿಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ 22ರ ಹರೆಯದ ಟಾಡ್ ಮರ್ಫಿ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ.