ಗುವಾಹಟಿ: ಇಂದು ಮುಂಜಾನೆ ಪಶ್ಚಿಮ ಬಂಗಾಳದ ಕೂಚ್ಬೆಹಾರ್ ಜಿಲ್ಲೆಯ ಭಾರತ - ಬಾಂಗ್ಲಾದೇಶ ಗಡಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಣೆದಾರನನ್ನು ಬಿಎಸ್ಎಫ್ ಹೊಡೆದುರುಳಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯಿಂದ INSAS ರೈಫಲ್ಗಳನ್ನು ಕಸಿದುಕೊಳ್ಳಲು ಯತ್ನಿಸಿದ ಹಿನ್ನೆಲೆ 15 - 20 ಶಂಕಿತ ಜಾನುವಾರು ಕಳ್ಳಸಾಗಣೆದಾರರ ಗುಂಪಿನ ಮೇಲೆ ಬಿಸ್ಎಫ್ ಗುಂಡು ಹಾರಿಸಿದೆ ಎಂದು ತಿಳಿಸಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಗಿಟಾಲ್ದಾಹಾ ಬ್ಲಾಕ್ 2 ರ ನಿವಾಸಿ ಲುತ್ಪರ್ ರಹಮಾನ್ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಅಲ್ಲಿ ನಿಧನ ಆಗಿದ್ದಾನೆ. ರೆಹಮಾನ್ ಈ ಪ್ರದೇಶದ ಜಾನುವಾರು ಕುಖ್ಯಾತ ಕಳ್ಳಸಾಗಣೆದಾರರಾಗಿದ್ದ ಎಂದು ಕೂಚ್ಬೆಹಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘರ್ಷಣೆಯಲ್ಲಿ ಓರ್ವ ಬಿಎಸ್ಎಫ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.