ರಾಯಗಢ(ಮಹಾರಾಷ್ಟ್ರ):ರಾಯಗಢ ಜಿಲ್ಲೆಯ ಪ್ರವಾಸಿ ತಾಣ ಹರಿಹರೇಶ್ವರ ಸಮುದ್ರದಲ್ಲಿ ಅನುಮಾನಾಸ್ಪದ ದೋಣಿ ಪತ್ತೆಯಾಗಿದ್ದು, ಅದರಲ್ಲಿ ಎಕೆ 47 ಬಂದೂಕುಗಳು ಹಾಗೂ ಶಸ್ತ್ರಾಸ್ತ್ರಗಳಿದ್ದವು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ.
ಮಹಾರಾಷ್ಟ್ರದ ರಾಯಗಢದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಬೋಟ್ ಪತ್ತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರು ಹಾಗೂ ಮೀನುಗಾರರ ವಿಚಾರಣೆ ಆರಂಭಿಸಿದ್ದಾರೆ. 2008ರಲ್ಲಿ ಮುಂಬೈನಲ್ಲಿ ದಾಳಿ ನಡೆಯುವುದಕ್ಕೂ ಮುಂಚಿತವಾಗಿ ಗುಜರಾತ್ನ ಪೋರ್ ಬಂದರ್ನಲ್ಲಿ ಇದೇ ರೀತಿಯ ದೋಣಿ ಕಂಡುಬಂದಿತ್ತು.
ದೋಣಿ ಪತ್ತೆಯಾಗಿರುವ ಪ್ರದೇಶ ಮುಂಬೈನಿಂದ 200 ಕಿಲೋ ಮೀಟರ್ ಹಾಗೂ ಪುಣೆಯಿಂದ 170 ಕಿಲೋ ಮೀಟರ್ ದೂರದಲ್ಲಿದೆ. ಮಹಾರಾಷ್ಟ್ರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ನಿರಂತರವಾಗಿ ಹಬ್ಬಗಳು ಬರಲಿದ್ದು ಇದರ ಬೆನ್ನಲ್ಲೇ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ರಾಯಗಢ ಶಾಸಕಿ ಅದಿತಿ ತಾಟಕರ್ ಪ್ರತಿಕ್ರಿಯಿಸಿ, ಸ್ಥಳೀಯ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಪ್ರಕರಣವನ್ನು ಎಟಿಎಸ್ ಮೂಲಕ ತನಿಖೆ ನಡೆಸಲು ಸಿಎಂ ಹಾಗೂ ಡೆಪ್ಯುಟಿ ಸಿಎಂ ಬಳಿ ಮನವಿ ಮಾಡುವುದಾಗಿ ತಿಳಿಸಿದರು.