ನವದೆಹಲಿ: 1893, ಸೆಪ್ಟೆಂಬರ್ 11 ರಂದು ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿಕೊಂಡಿದ್ದಾರೆ. ವಿವೇಕಾನಂದರ ಅಂದಿನ ಭಾಷಣವು ಭಾರತೀಯ ಸಂಸ್ಕೃತಿಯ ಮಹತ್ವ ಪ್ರದರ್ಶಿಸಿದೆ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 1893ರ ಇದೇ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವು ಭಾರತೀಯ ಸಂಸ್ಕೃತಿಯ ಮಹತ್ವವನ್ನು ಪ್ರದರ್ಶಿಸಿತು. ಅವರ ಮಾತು ನ್ಯಾಯಯುತ, ಸಮೃದ್ಧ ಮತ್ತು ಜಗತ್ತನ್ನು ಒಗ್ಗೂಡಿಸುವ ಸಾಮರ್ಥ್ಯ ಹೊಂದಿತ್ತು ಎಂದು ಉಲ್ಲೇಖಿಸಿದ್ದಾರೆ.
1893ರ ಈ ದಿನ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದರು. ವೇದಾಂತದ ಪರಿಕಲ್ಪನೆಗಳು ಮತ್ತು ಆದರ್ಶಗಳು ಪಾಶ್ಚಿಮಾತ್ಯ ಜಗತ್ತಿಗೆ ಪರಿಚಯಿಸಿದರು. 19 ನೇ ಶತಮಾನದ ಭಾರತೀಯ ಅತೀಂದ್ರಿಯ ರಾಮಕೃಷ್ಣ ಪರಮಹಂಸರ ಶಿಷ್ಯರಲ್ಲಿ ಸ್ವಾಮಿ ವಿವೇಕಾನಂದರು ಪ್ರಮುಖರಾಗಿದ್ದರು.