ಮುಂಬೈ(ಮಹಾರಾಷ್ಟ್ರ) :ಟಿ-ಸಿರೀಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಟಿ-ಸಿರೀಸ್ ಎಂಡಿ ಭೂಷಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣ ದಾಖಲು - ಮಹಾರಾಷ್ಟ್ರ
ಮುಂಬೈ ಪೊಲೀಸರು ಟಿ-ಸಿರೀಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಇವರು ಮಹಿಳೆಯೋರ್ವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ..
ಟಿ-ಸೀರೀಸ್ ಎಂಡಿ ಭೂಷಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣ ದಾಖಲು
ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಈ ಬಗ್ಗೆ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. 30 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಂಧೇರಿ(ಪಶ್ಚಿಮ)ಯ ಡಿಎನ್‌ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.
ಈ ದೂರಿನ ಪ್ರಕಾರ, ಭೂಷಣ್ ಕುಮಾರ್ ಅವರು ಕಂಪನಿಯ ಕೆಲವು ಯೋಜನೆಗಳಲ್ಲಿ ಉದ್ಯೋಗವನ್ನು ಒದಗಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.