ಕರ್ನಾಟಕ

karnataka

ETV Bharat / bharat

ತಮಿಳುನಾಡಿನಲ್ಲಿ ಸರಣಿ ಆತ್ಮಹತ್ಯೆ.. ಮತ್ತೋರ್ವ ವಿದ್ಯಾರ್ಥಿನಿ ಸುಸೈಡ್​​... ಡೆತ್​ ನೋಟ್​ ಪತ್ತೆ - TAMIL NADU ANOTHER CLASS 12 GIRL DIES

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, 12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಬಾಲಕಿ ಮನೆಯಲ್ಲಿ ಡೆತ್​ನೋಟ್ ಬರೆದಿಟ್ಟು ಸಾವಿನ ಕದ ತಟ್ಟಿದ್ದಾರೆ.

TAMIL NADU ANOTHER CLASS 12 GIRL DIES
TAMIL NADU ANOTHER CLASS 12 GIRL DIES

By

Published : Jul 26, 2022, 4:07 PM IST

ಚೆನ್ನೈ(ತಮಿಳುನಾಡು): ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ನಡೆದಿರುವ ಮೂರನೇ ಪ್ರಕರಣ ಇದಾಗಿದ್ದು,ಮನೆಯಲ್ಲಿ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪೋಷಕರು ಐಎಎಸ್​​​ ಮಾಡುವಂತೆ ಒತ್ತಡ ಹಾಕಿದ್ದರಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

12ನೇ ತರಗತಿಯಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ನಾಲ್ಕು ಪುಟಗಳ ಆತ್ಮಹತ್ಯೆ ಪತ್ರ ಬರೆದಿಟ್ಟಿರುವ ಬಾಲಕಿ, ಪೋಷಕರು ತನ್ನ ಮೇಲೆ ಇಟ್ಟಿರುವ ಐಎಎಸ್ ಕನಸು ನನಸು ಮಾಡಲು ತಾನು ಅಸಮರ್ಥೆ ಎಂದು ಹೇಳಿಕೊಂಡಿದ್ದರಂತೆ.

ಇದನ್ನೂ ಓದಿರಿ:ತಮಿಳುನಾಡಿನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.. ವಾರದಲ್ಲಿ ಎರಡನೇ ಘಟನೆ

ಮೃತ ಬಾಲಕಿ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೇ ಅಂತಿಮ ವಿಧಿ - ವಿಧಾನ ನಡೆಸಲು ಕುಟುಂಬಸ್ಥರು ಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಬಾಲಕಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಜೊತೆಗೆ ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶಕ್ತಿ ಗಣೇಶನ್ ತಿಳಿಸಿದ್ದಾರೆ.

ಕಳೆದ ಜುಲೈ 13ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ಸಹ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್​​ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇಲಿಂದ ಮೇಲೆ ವಿದ್ಯಾರ್ಥಿನಿಗಳ ಆತ್ಮಹತ್ಯೆ ಪ್ರಕರಣ ನಡೆಯತ್ತಿರುವ ಕಾರಣ ಮುಖ್ಯಮಂತ್ರಿ ಸ್ಟಾಲಿನ್​ ಕಳವಳ ವ್ಯಕ್ತಪಡಿಸಿದ್ದು, ಈ ರೀತಿಯ ಕ್ರಮ ಕೈಗೊಳ್ಳದಂತೆ ಹಾಗೂ ಆಲೋಚನೆಗಳಿಂದ ದೂರು ಇರುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

...view details