ಕರ್ನಾಟಕ

karnataka

ETV Bharat / bharat

ತಮಿಳುನಾಡಿನಲ್ಲಿ 12,110 ಕೋಟಿ ರೂ. ರೈತರ ಸಾಲ ಮನ್ನಾ: ಸಿಎಂ ಘೋಷಣೆ - ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡಿನ ರೈತರಿಗೆ ಅಲ್ಲಿನ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, 16 ಲಕ್ಷ ಅನ್ನದಾತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಸರ್ಕಾರ ತಿಳಿಸಿದೆ.

Tamil Nadu CM
Tamil Nadu CM

By

Published : Feb 5, 2021, 4:07 PM IST

ಚೆನ್ನೈ:ತಮಿಳುನಾಡಿನಲ್ಲಿ ಏಪ್ರಿಲ್​-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಆಡಳಿತ ಪಕ್ಷ ಎಐಎಡಿಎಂಕೆ ಭರ್ಜರಿಯಾಗಿ ತಯಾರಾಗುತ್ತಿದೆ. ಇದರ ಬೆನ್ನಲ್ಲೇ ಮಹತ್ವದ ಘೋಷಣೆ ಮಾಡಿದೆ.

ಮತ್ತೊಂದು ಅವಧಿ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಪಳನಿಸ್ವಾಮಿ ರೈತರಿಗೆ ಭರ್ಜರಿ ಗಿಫ್ಟ್​ ನೀಡಿದ್ದು, ಒಟ್ಟು 12,110 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿ ಘೋಷಣೆ ಮಾಡಿದ್ದಾರೆ. ಸಹಕಾರಿ ಬ್ಯಾಂಕ್​ಗಳಲ್ಲಿ ರೈತರು ಮಾಡಿರುವ ಕೃಷಿ ಸಾಲ ಮನ್ನಾ ಆಗಲಿದ್ದು, ಇದರಿಂದ 16 ಲಕ್ಷ ರೈತರಿಗೆ ಸಹಾಯವಾಗಲಿದೆ.

ಓದಿ: ತಮಿಳುನಾಡು ವಿಧಾನಸಭೆ ಫೈಟ್​​: ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಘೋಷಣೆ!

ಸೈಕ್ಲೋನ್ ಹಾಗೂ ಕೊರೊನಾ ವೈರಸ್​ನಿಂದಾಗಿ ರೈತರು ಅಪಾರ ಪ್ರಮಾಣದಲ್ಲಿ ತೊಂದರೆ ಅನುಭವಿಸಿದ್ದು, ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಆಡಳಿತಾರೂಢ ಎಐಎಡಿಎಂಕೆ ಈಗಾಗಲೇ ಘೋಷಣೆ ಮಾಡಿದೆ.

ತಮಿಳುನಾಡಿನಲ್ಲಿ ಸದ್ಯ ಎಐಎಡಿಕೆ ಪಕ್ಷ ಆಡಳಿತ ನಡೆಸುತ್ತಿದ್ದು, ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 234 ಸ್ಥಾನ ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್​- ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ABOUT THE AUTHOR

...view details