ತಿರುವಳ್ಳೂರ್(ತಮಿಳುನಾಡು):ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಫಲಿತಾಂಶ ಕಳೆದ ರಾತ್ರಿ ಪ್ರಕಟಗೊಂಡಿದ್ದು, 9.93 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ನ ಇಂದಿರಾ ನಗರದಲ್ಲಿ ನಡೆದಿದೆ.
19 ವರ್ಷದ ವಿದ್ಯಾರ್ಥಿನಿ ಫಲಿತಾಂಶದಿಂದ ನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿನ ಹಾದಿ ತುಳಿದಿದ್ದಾಳೆ. ಮೃತಳನ್ನು ಲಕ್ಷಣ ಸ್ವೇಧ ಎಂದು ಗುರುತಿಸಲಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೋಸ್ಕರ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.