ಚೆನ್ನೈ (ತಮಿಳುನಾಡು):ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ನೀಡಲಾಗುವುದಾಗಿ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇಂಜಿನಿಯರಿಂಗ್‌ನಂತಹ ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ನಿರ್ಣಯಿಸಲು ರಾಜ್ಯ ಸರ್ಕಾರವು ಈ ಹಿಂದೆ ಆಯೋಗವೊಂದನ್ನು ಸ್ಥಾಪಿಸಿತ್ತು. ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಮುರುಗೇಶನ್ ನೇತೃತ್ವದ ಈ ಆಯೋಗವು ಸರ್ಕಾರಿ ಶಾಲೆಗಳ ಕೆಲವೇ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ ಎಂಬುದನ್ನು ಎತ್ತಿ ತೋರಿಸಿದೆ. ಹೀಗಾಗಿ ಮೀಸಲಾತಿ ವಿಸ್ತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.