ಚೆನ್ನೈ(ತಮಿಳುನಾಡು): ತಮಿಳುನಾಡಿನಲ್ಲಿ ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸ್ಟಾಲಿನ್ ನೇತೃತ್ವದ ಡಿಎಂಕೆ ಇದೇ ಮೊದಲ ಸಲ ಕೃಷಿ ಬಜೆಟ್ ಮಂಡನೆ ಮಾಡಿದೆ. ಅನ್ನದಾತರ ಹಿತರಕ್ಷಣೆ ಹಾಗೂ ಕೃಷಿ ವಲಯದಲ್ಲಿ ಮತ್ತಷ್ಟು ಅಭಿವೃದ್ಧಿ ತರುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ತಮಿಳುನಾಡು ಕೃಷಿ ಸಚಿವ ಎಂಆರ್ಕೆ ಪನ್ನಿರಸೇಲ್ವಂ ಬಜೆಟ್ ಮಂಡನೆ ಮಾಡಿದ್ದು, 2021-22ನೇ ಸಾಲಿನ ಬಜೆಟ್ನಲ್ಲಿ ಕೃಷಿಗಾಗಿ Rs.34,220.65 ಕೋಟಿ ರೂ. ಮೀಸಲು ಇಟ್ಟಿದ್ದಾರೆ. ಪ್ರಮುಖವಾಗಿ ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಅಭಿವೃದ್ಧಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ರೇಷ್ಮೆ ಕೃಷಿ ಮತ್ತು ಅರಣ್ಯ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
4,508.23 ಕೋಟಿ ರೂ. ರೈತರ ವಿದ್ಯುತ್ ಬಳಕೆಗೋಸ್ಕರ ವಿನಯೋಗ ಮಾಡಲಾಗುವುದು ಎಂದು ತಿಳಿಸಿರುವ ಸಚಿವರು, ರೈತರು ಬಳಕೆ ಮಾಡುವ ಪಂಪ್ಸೆಟ್ಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ತಿಳಿಸಿದ್ದಾರೆ. 1,245. 45 ಕೋಟಿ ರೂ. ಕೃಷಿ ಇಲಾಖೆ ಅಭಿವೃದ್ಧಿಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದರು.