ಹೈದರಾಬಾದ್:ಇಲ್ಲಿನ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸುತ್ತಿದ್ದ ಅನಧಿಕೃತ ಸ್ಪಾ ಸೆಂಟರ್, ಮಸಾಜ್ ಸೆಂಟರ್ ಮೇಲೆ ಟಾಸ್ಕ್ಫೋರ್ಸ್ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ಉತ್ತರ ವಲಯದ ಮಹಾಂಕಾಳಿ, ಕಾರ್ಖಾನಾ ಮತ್ತು ಮಾರೇಡುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಮಸಾಜ್ ಪಾರ್ಲರ್‌ಗಳ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಸ್ಪಾ ನಿರ್ವಾಹಕರೊಂದಿಗೆ 12 ಮಹಿಳೆಯರು ಮತ್ತು ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಾಲಿಕೆಯ ಟ್ರೇಡ್ ಲೈಸನ್ಸ್ ಇಲ್ಲದೇ, ಸಿಸಿಟಿವಿ ಕ್ಯಾಮೆರಾಗಳಿಲ್ಲದೇ ಹಾಗೂ ಮಸಾಜ್ ಸೆಂಟರ್ಗೆ ಬರುವವರ ವಿವರಗಳನ್ನು ದಾಖಲಿಸದೇ ಸರ್ಕಾರದ ಮಾರ್ಗಸೂಚಿಗೆ ವಿರುದ್ಧವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನಲ್ಲೂ ದಾಳಿ:ರಾಜ್ಯದ ರಾಜಧಾನಿ ಚೆನ್ನೈನಲ್ಲಿ ಮಸಾಜ್ ಸೆಂಟರ್ಗಳ ನೆಪದಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ ಎಂಬ ನಿಖರ ಮಾಹಿತಿ ಪಡೆದ ಪೊಲೀಸರು ಚೆನ್ನೈನ 151 ಮಸಾಜ್ ಮತ್ತು ಸ್ಪಾ ಸೆಂಟರ್ಗಳ ಮೇಲೆ ದಾಳಿ ನಡೆಸಿದ್ದರು. ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.