ಅಯೋಧ್ಯೆ:ಈಗ ಧನೀಪುರದ ಐದು ಎಕರೆ ಜಮೀನಿನಲ್ಲಿ ಮಸೀದಿ ನಿರ್ಮಾಣಕ್ಕಾಗಿ ದೇಣಿಗೆಗೆ ತೆರಿಗೆ ವಿಧಿಸಲಾಗುವುದಿಲ್ಲ. ಮಸೀದಿ ನಿರ್ಮಾಣಕ್ಕಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಪ್ರಮಾಣಪತ್ರವನ್ನು ಆನ್‌ಲೈನ್‌ನಲ್ಲಿ ಸ್ವೀಕರಿಸಿದ್ದೇನೆ ಎಂದು ಮಸೀದಿ ನಿರ್ಮಣ ಟ್ರಸ್ಟ್‌ನ ಕಾರ್ಯದರ್ಶಿ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್‌ನ ವಕ್ತಾರ ಅಥರ್ ಹುಸೇನ್ ಮಾತನಾಡಿ, ಯಾವುದೇ ಪ್ರಚಾರ ಮತ್ತು ಮನವಿಯಿಲ್ಲದೇ ಆನ್‌ಲೈನ್ ಪೋರ್ಟಲ್ ಮೂಲಕ ಮಸೀದಿ ನಿರ್ಮಾಣಕ್ಕಾಗಿ ಅವರ ಟ್ರಸ್ಟ್ ಇದುವರೆಗೆ 20 ಲಕ್ಷ ರೂ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 (ಜಿ) ಅಡಿಯಲ್ಲಿ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿಗಾಗಿ ಅರ್ಜಿ ಸಲ್ಲಿಸಿದೆ. ಈಗ ಪ್ರಮಾಣಪತ್ರ ಪಡೆಯಲಾಗಿದೆ ಎಂದರು.