ಕರೂರ್(ತಮಿಳುನಾಡು):ಲೈಂಗಿಕ ದೌರ್ಜನ್ಯದಿಂದಾಗಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿನಿವೋರ್ವಳ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಶಿಕ್ಷಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದ್ದು, ಕಾಲೇಜ್ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.
ತಿರುಚ್ಚಿಯಲ್ಲಿ ವ್ಯಾಸಂಗ ಮಾಡ್ತಿದ್ದ 12ನೇ ತರಗತಿ ವಿದ್ಯಾರ್ಥಿನಿಯೋರ್ವಳು ನವೆಂಬರ್ 19ರಂದು ಆತ್ಮಹತ್ಯೆಗೆ ಶರಣಾಗಿದ್ಧ ಘಟನೆ ಕರೂರ್ನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜ್ನ ಶಿಕ್ಷಕನೋರ್ವನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಶಿಕ್ಷಕ ತಿರುಚ್ಚಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಶಿಕ್ಷಕನ ಬಳಿ ಡೆತ್ನೋಟ್ ಪತ್ತೆಯಾಗಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮನ್ನ ಚುಡಾಯಿಡಿದ್ದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ವಧು-ವರನಿಗೋಸ್ಕರ ಬೆಳ್ಳಿ ಶೂ,ಬೆಲ್ಟ್ & ಪರ್ಸ್: ಜೋಧಪುರ ವ್ಯಾಪಾರಿ ಆಭರಣಕ್ಕೆ ಇನ್ನಿಲ್ಲದ ಡಿಮ್ಯಾಂಡ್
ಕರೂರಿನಲ್ಲಿ ಕುಟುಂಬ ಸಮೇತವಾಗಿ ವಾಸವಾಗಿದ್ದ ಶಿಕ್ಷಕ ಬುಧವಾರ ಮಧ್ಯಾಹ್ನ ತಿರುಚ್ಚಿಯಲ್ಲಿರುವ ಅತ್ತೆ ಮನೆಗೆ ತೆರಳಿದ್ದರು. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ 44 ವರ್ಷದ ಶಿಕ್ಷಕನಿಗೆ ಹೆಂಡತಿ ಹಾಗೂ ಇಬ್ಬರು ಮಕ್ಕಳಿದ್ದಾರೆಂದು ತಿಳಿದು ಬಂದಿದೆ.