ಕನ್ಯಾಕುಮಾರಿ(ತಮಿಳುನಾಡು):ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಕನ್ನಟ್ಟುವಿಲೈ ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡ್ತಿದ್ದಾರೆ. ಇಲ್ಲಿ ಹೊಲಿಗೆ ವಿಷಯದ ಕುರಿತಾಗಿ ಪಾಠ ಮಾಡುವ ಶಿಕ್ಷಕ ತಮ್ಮ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಪ್ರಾರ್ಥನೆ ಓದುವಂತೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.