ಕರ್ನಾಟಕ

karnataka

ETV Bharat / bharat

ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ - Police have arrested a male teacher

ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

unnatural molestation
ಅಸೈನಾರ್

By

Published : Oct 26, 2022, 3:57 PM IST

ಮಲಪ್ಪುರಂ(ಕೇರಳ): ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನನ್ನು ಬಂಧಿಸಲಾಗಿದೆ. ಮಲಪ್ಪುರಂ ಜಿಲ್ಲೆಯ ನಿಲಂಬೂರಿನ ಚುಂಕಠಾರ ಮೂಲದ ಅಸೈನಾರ್ (42) ಬಂಧಿತ ಆರೋಪಿ. ಅಕ್ಟೋಬರ್ 25ರಂದು ಶಿಕ್ಷಕನನ್ನು ನಿಲಂಬೂರ್ ಪೊಲೀಸರು ಬಂಧಿಸಿದ್ದಾರೆ.

ಅಸೈನಾರ್ ನಿಲಂಬೂರಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಬಾಲಕನನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ನೀಚತನದ ಪರಮಾವಧಿ.. ಎಲ್​ಕೆಜಿ ಮಗು ಮೇಲೆ ಶಾಲೆಯ ವಾಹನ ಚಾಲಕನಿಂದ ಲೈಂಗಿಕ ಕಿರುಕುಳ

ನಂತರ ಮನೆಯವರು ನಿಲಂಬೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ.

ABOUT THE AUTHOR

...view details