ಅಹ್ಮದ್‌ನಗರ (ಮಹಾರಾಷ್ಟ್ರ): ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಇಬ್ಬರು ಶಿಕ್ಷಕರು ತಮ್ಮ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಹಾರಾಷ್ಟ್ರದ ಶಿರಡಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಶಿಕ್ಷಕರಿಗೆ ಗ್ರಾಮಸ್ಥರು ಮತ್ತು ಪೋಷಕರೇ ಶಾಲೆಯಲ್ಲೇ ಹಿಡಿದು ಥಳಿಸಿ ಬುದ್ಧಿ ಕಲಿಸಿದ್ದಾರೆ. ಅಲ್ಲದೇ, ಇಬ್ಬರೂ ಆರೋಪಿಗಳನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದಾರೆ.
ಇಲ್ಲಿನ ಜಿಲ್ಲಾ ಪರಿಷತ್ ಶಾಲೆಯೊಂದರಲ್ಲಿ 7 ಮತ್ತು 8ನೇ ತರಗತಿಯ ಹಲವು ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಅಶ್ಲೀಲವಾಗಿ ವರ್ತಿಸಿದ್ದರು ಎಂದು ಹೇಳಲಾಗಿದೆ. ಈ ವಿಷಯ ತಿಳಿಸಿದ ಪೋಷಕರು ಮತ್ತು ಗ್ರಾಮಸ್ಥರು ಶಾಲೆಗೆ ನುಗ್ಗಿ ಕೈಗೆ ಸಿಕ್ಕ ಶಿಕ್ಷಕರಿಗೆ ಥಳಿಸಿದ್ದಾರೆ. ಇತ್ತ, ಪೊಲೀಸರು ಕೂಡ ಶಾಲೆಗೆ ಬಂದ ಆರೋಪಿ ಶಿಕ್ಷಕರನ್ನು ಬಂಧಿಸಿದ್ದಾರೆ.
ವಿಷಯ ಬಾಯ್ಬಿಡದಂತೆ ಬೆದರಿಕೆ: ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋಗಳನ್ನು ಶಿಕ್ಷಕರು ತೋರಿಸುವುದಲ್ಲದೇ ನಮ್ಮೊಂದಿಗೆ ಕೆಟ್ಟಾಗಿ ನಡೆದುಕೊಳ್ಳುತ್ತಿದ್ದರು. ಶಿಕ್ಷಕರ ಈ ಕೃತ್ಯಕ್ಕೆ 10ರಿಂದ 12 ಅಪ್ರಾಪ್ತ ಬಾಲಕಿಯರೂ ಬಲಿಯಾಗಿದ್ದಾರೆ. ಇದು ಹಲವು ದಿನಗಳಿಂದ ನಡೆಯುತ್ತಿತ್ತು. ಅಲ್ಲದೇ, ಈ ವಿಷಯ ಎಲ್ಲಿಯೂ ಬಾಯ್ಬಿಡದಂತೆ ಬೆದರಿಕೆ ಹಾಕುತ್ತಿದ್ದರು. ಶಾಲಾ ಪ್ರಮಾಣಪತ್ರ ರದ್ದುಗೊಳಿಸುವುದಾಗಿ ಬೆದರಿಕೆವೊಡ್ಡುತ್ತಿದ್ದರು ಎಂದು ವಿದ್ಯಾರ್ಥಿನಿಯೊಬ್ಬಳು ತಿಳಿಸಿದ್ದಾರೆ.
ಶಿಕ್ಷಕರ ಕೃತ್ಯ ಹೊರ ಬಿದ್ದಿದ್ದು ಹೇಗೆ?: ಆರೋಪಿ ಶಿಕ್ಷಕರು ಶಾಲಾ ಪ್ರಮಾಣಪತ್ರ ರದ್ದುಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರಿಂದ ವಿದ್ಯಾರ್ಥಿಗಳು ಇದೇ ಭಯದಿಂದ ಕೃತ್ಯವನ್ನು ಸಹಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ ಒಬ್ಬ ಹುಡುಗಿ ಶಾಲೆ ಹೋಗುವುದನ್ನೇ ಬಿಟ್ಟಿದ್ದಳು. ಆಗ ಆ ಬಾಲಕಿಗೆ ಶಾಲೆಗೆ ಹೋಗದಿರುವ ಬಗ್ಗೆ ತಾಯಿ ಪ್ರಶ್ನೆ ಮಾಡಿದ್ದರು.
ಇದನ್ನೂ ಓದಿ:13ರ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿ, ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಮಾವ