ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 16 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶ: 5 ವರ್ಷದ ಬಾಲಕಿ ಮೇಲೆ 16 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ - ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ
ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ 5 ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ವಿಲಕ್ಷಣ ಘಟನೆ ನಡೆದಿದೆ.
ಬಾಗ್ರಾಜಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಕುಂದಂ ಪೊಲೀಸ್ ಠಾಣೆ ಇನ್ಚಾರ್ಜ್ ಪ್ರತಾಪ್ ಮಾರ್ಕನ್ ತಿಳಿಸಿದ್ದಾರೆ. ಬಾಲಕಿಯು ಕೂಲ್ ಡ್ರಿಂಕ್ಸ್ ಕೊಳ್ಳಲು ತಮ್ಮದೇ ಅಂಗಡಿಗೆ ತೆರಳಿದ್ದ ವೇಳೆ 16 ವರ್ಷದ ಬಾಲಕ ಈ ಅತ್ಯಾಚಾರ ನಡೆಸಿದ್ದಾನೆ.
ಮನೆಗೆ ಬಂದಾಗ ಮಗುವಿನ ಬಟ್ಟೆಯ ಮೇಲೆ ಆಗಿದ್ದ ರಕ್ತದ ಕಲೆಗಳನ್ನು ಗಮನಿಸಿದ ತಾಯಿ ಅನುಮಾನಗೊಂಡು ಲ್ಯಾಬ್ಗೆ ಪರೀಕ್ಷೆಗೆಂದು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು 16 ವರ್ಷದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.