ಕರ್ನಾಟಕ

karnataka

ETV Bharat / bharat

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ, ಬಾಲಕಿಯ ಶವ ಪತ್ತೆ! - Etv bharat kannada

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು, ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Teen couple found hanging from tree
Teen couple found hanging from tree

By

Published : Sep 20, 2022, 11:15 AM IST

ಸಂತ ಕಬೀರ್ ನಗರ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಪ್ರತಿದಿನ ಒಂದಿಲ್ಲೊಂದು ಕ್ರಿಮಿನಲ್​ ಪ್ರಕರಣಗಳು ಬೆಳಕಿಗೆ ಬರ್ತಿವೆ. ಕಳೆದ ಎರಡು ದಿನಗಳ ಹಿಂದೆ ಪಿಲಿಭಿತ್​​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಕಾಮುಕರು ಸಜೀವ ದಹನ ಮಾಡಿರುವ ಘಟನೆ ನಡೆದಿತ್ತು.

ಸಂತ್​ ಕಬೀರ್​ ನಗರದ ರಾಂಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕ ಹಾಗೂ 15 ವರ್ಷದ ಬಾಲಕಿಯ ಮೃತದೇಹಗಳು ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತರ ಕುಟುಂಬಸ್ಥರು ಮಾತನಾಡಿದ್ದು, ಇಬ್ಬರನ್ನು ಹತ್ಯೆಗೈದು, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇತು ಹಾಕಿದ್ದಾರೆಂದು ಆರೋಪ ಮಾಡಿದ್ದಾರೆ. ಮೃತ ಯುವಕ ಮತ್ತು ಬಾಲಕಿ ನಡುವೆ ಅಕ್ರಮ ಸಂಬಂಧವಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿ ಕೊಂದ ಕಾಮುಕರು

ಘಟನಾ ಸ್ಥಳದಲ್ಲಿ ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಸೋನಮ್ ಕುಮಾರ್ ತಿಳಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಅಪ್ರಾಪ್ತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ABOUT THE AUTHOR

...view details