ಮುಜಾಫರ್ನಗರ (ಉತ್ತರ ಪ್ರದೇಶ):ಹದಿನೈದು ವರ್ಷದ ಬಾಲಕಿ ಮೇಲೆ ಆಕೆಯ ಸಹೋದರನ ಮುಂದೆಯೇ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಮುಜಾಫರ್ನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಇಡೀ ದುಷ್ಕೃತ್ಯವನ್ನು ಕಾಮುಕರು ಚಿತ್ರೀಕರಿಸಿದ್ದು, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಬಾಲಕಿ ಹಾಗೂ ಆತನ ಸಹೋದರ ಮನೆಗೆ ಹಿಂದಿರುಗಿದ್ದು, ಘಟನೆಯ ಬಗ್ಗೆ ಪೋಷಕರ ಗಮನಕ್ಕೆ ತಂದಿದ್ದಾರೆ. ಈ ಕುರಿತು ಸಂತ್ರಸ್ತೆಯ ಪೋಷಕರು ಫುಗಾನಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ: Pornography case: ಮಾಡೆಲ್ ಗೆಹನಾ ಸೇರಿ ಮೂವರಿಗೆ ಮುಂಬೈ ಕ್ರೈಂ ಬ್ರಾಂಚ್ ನೋಟಿಸ್!