ಹೈದರಾಬಾದ್: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ದುಷ್ಕೃತ್ಯ ಬೆಳಕಿಗೆ ಬಂದಿದೆ. ಮಂಗಳತ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಂಗಾರು ಬಸ್ತಿಯಲ್ಲಿ ಬಾಲಕಿ ಮೇಲೆ ಸುಮಿತ್ ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.
ಬುಧವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದ್ದು, ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸುಮಿತ್ನನ್ನು ರೆಡ್ ಹ್ಯಾಂಡಾಗಿ ಹಿಡಿದ ಸ್ಥಳೀಯರು, ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಮಿತ್ ಈಗಾಗಲೇ ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಎಂದು ತಿಳಿದು ಬಂದಿದೆ.