ಹೈದರಾಬಾದ್ (ತೆಲಂಗಾಣ): ಹೈದರಾಬಾದ್ನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್ರೇಪ್ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗ ಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಎಂ.ರಘುನಂದನ್ ರಾವ್ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.
ಮೇ 28ರಂದು ಪಬ್ಗೆ ತೆರಳಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿಲಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪ್ರಾಪ್ತರು ಸೇರಿ ಐವರು ಭಾಗಿಯಾಗಿದ್ದರು. ಈ ಸಂಬಂಧ ಜೂ.4ರಂದು ಮಾಧ್ಯಮಗೋಷ್ಟಿ ಮಾಡಿದ್ದ ಶಾಸಕ ರಘುನಂದನ್ ಸಂತ್ರಸ್ತ ಬಾಲಕಿಯ ಫೋಟೋ ಮತ್ತು ವಿಡಿಯೋ ಬಿಡುಗಡೆ ಮಾಡಿದ್ದರು. ಬಳಿಕ ಅವುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಹೀಗಾಗಿ ಐಪಿಸಿ ಸೆಕ್ಷನ್ 228-ಎ ಅಡಿ ಸೋಮವಾರ ರಾತ್ರಿ ಶಾಸಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.