ಹೈದರಾಬಾದ್ (ತೆಲಂಗಾಣ): ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಇತರ ರಾಜ್ಯಗಳಿಗೆ ಹೋಲಿಸಿದರೆ ತೆಲಂಗಾಣದಲ್ಲಿ ಕೋವಿಡ್ ಸಾವು-ನೋವು ಸ್ವಲ್ಪ ಕಡಿಮೆಯಿದ್ದರೂ ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಲಾಕ್‌ಡೌನ್ ಮಾಡಬೇಕೆಂಬ ಹಲವರ ಅಭಿಪ್ರಾಯಕ್ಕೆ ಅನುಗುಣವಾಗಿ ಲಾಕ್‌ಡೌನ್ ಸಾಧಕ-ಬಾಧಕಗಳ ಕುರಿತು ಈ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ವಿಧಿಸಿದ್ದರೂ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಇಲ್ಲ. ಲಾಕ್ಡೌನ್ನಿಂದಾಗಿ ಧಾನ್ಯ ಸಂಗ್ರಹದ ಮೇಲೆ ಆಗುವ ದುಷ್ಪರಿಣಾಮಗಳನ್ನೂ ಗಮನದಲ್ಲಿ ಇಟ್ಟುಕೊಳ್ಳಲಾಗುವುದು ಎಂದು ಸಿಎಂ ಕಚೇರಿ ಹೇಳಿದೆ.