ಹೈದರಾಬಾದ್ (ತೆಲಂಗಾಣ):ಕೋವಿಡ್ ನಿಯಂತ್ರಣಕ್ಕೆ ಜಾರಿ ಮಾಡಲಾಗಿರುವ ಲಾಕ್ಡೌನ್ ಮತ್ತು ಕೃಷಿ ವಿಚಾರಗಳಿಗೆ ಸಂಬಂಧಿಸಿದಂತೆ ಇಂದು ತೆಲಂಗಾಣ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಅನ್ಲಾಕ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ತರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಗತಿ ಭವನದಲ್ಲಿ ತುರ್ತು ರಾಜ್ಯ ಕ್ಯಾಬಿನೆಟ್ ಸಭೆ ನಡೆಯಲಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಕೃಷಿ ಸಂಬಂಧಿತ ವಿಚಾರಗಳು, ಗೋದಾವರಿ ನೀರಿನ ಬಳಕೆ, ಜಲ ವಿದ್ಯುತ್ ಉತ್ಪಾದನೆ ಮುಂತಾದ ವಿಚಾರಗಳ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ.