ಮುಂಬೈ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಅವರ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಭೇಟಿ ಮಾಡಿದರು.
ಮಹಾರಾಷ್ಟ್ರ ಸಿಎಂ ಭೇಟಿಯಾದ ತೆಲಂಗಾಣ ಸಿಎಂ ಪ್ರತಿಪಕ್ಷಗಳು ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವದ್ದಾಗಿದೆ. ವಿರೋಧ ಪಕ್ಷಗಳು ಒಗ್ಗೂಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋರಾಟ ನಡೆಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಕರೆ ನೀಡಿದ್ದಾರೆ. ಈ ಹಿಂದೆ, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಕೇಂದ್ರದ ವಿರುದ್ಧ ರಣಕಹಳೆ ಮೊಳಗಿಸಿದ್ದರು.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರಕ್ಕೆ ಬಂದಿದ್ದ ಅವರು, ಸಿಎಂ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಸುಪ್ರೀಮೊ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರದಲ್ಲಿ, ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ.
ರಾಜ್ಯದಲ್ಲಿ ಸಮರ್ಥ ಪ್ರಾದೇಶಿಕ ಪಕ್ಷಗಳು ಒಗ್ಗೂಡಿ ಹೋರಾಡಿದರೆ ಬಿಜೆಪಿಯನ್ನು ಸೋಲಿಸಬಹುದು ಎಂಬುದು ಕೆಸಿಆರ್ ಅಭಿಪ್ರಾಯ. ಈ ಕಾರಣಕ್ಕೆ ಅವರು ಈಗ ಪ್ರಬಲ ವಿರೋಧ ಪಕ್ಷವನ್ನು ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅದೇ ಧಾಟಿಯಲ್ಲಿ ಇಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವರ್ಷಾ ನಿವಾಸದಲ್ಲಿನ ಭೇಟಿ ಮಹತ್ವ ಪಡೆದುಕೊಂಡಿದೆ.
ಮಹಾರಾಷ್ಟ್ರದ ರಾಜಕೀಯ ಮುಖಂಡರ ಜೊತೆ ತೆಲಂಗಾಣ ಸಿಎಂ ಇದನ್ನೂ ಓದಿ: ಮೋಗಾ ಮತಗಟ್ಟೆಗಳಿಗೆ ಭೇಟಿ ನೀಡದಂತೆ ಸೋನು ಸೂದ್ರನ್ನು ನಿರ್ಬಂಧಿಸಿದ ಚುನಾವಣಾ ಆಯೋಗ
ಈ ಸಭೆಯ ನಂತರ ಸಿಎಂ ಕೆಸಿಆರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೆಸಿಆರ್ ಜೊತೆ ರಾಜ್ಯಸಭಾ ಸದಸ್ಯೆ ಕೆ.ಕವಿತಾ, ಸಂಸದ ಸಂತೋಷ್, ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ, ಸಚಿವ ಸುಭಾಷ್ ದೇಸಾಯಿ, ಶಿವಸೇನೆ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಸಂಸದ ಅರವಿಂದ್ ಸಾವಂತ್ ಉಪಸ್ಥಿತರಿದ್ದರು.