ಕರ್ನಾಟಕ

karnataka

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿದ ಸಿಎಂ

By

Published : May 19, 2021, 7:38 PM IST

ಕೋವಿಡ್​ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಕೆಸಿಆರ್​ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

Telangana CM
Telangana CM

ಹೈದರಾಬಾದ್​: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಇಂದು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿ ಕೋವಿಡ್​ಗೋಸ್ಕರ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳಿಗೆ ಧೈರ್ಯ ತುಂಬಿದ್ದಾರೆ.

ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಕೆಸಿಆರ್​, ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೋವಿಡ್ ರೋಗಿಗಳೊಂದಿಗೆ ಚರ್ಚೆ ನಡೆಸಿದರು. ಜತೆಗೆ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದುಕೊಂಡರು. ಇದರ ಬೆನ್ನಲ್ಲೇ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ರು. ಇದಾದ ಬಳಿಕ ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೊಳಗಾಗಿದ್ದ ಕೆಸಿಆರ್​ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇದರ ಬೆನ್ನಲ್ಲೇ ಅವರು ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿದರು. ಐಸಿಯು ವಾರ್ಡ್​, ತುರ್ತು ನಿಗಾ ಘಟಕ, ಸಾಮಾನ್ಯ ವಾರ್ಡ್​ಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: 700 ಕೋಟಿ ರೂ. ವೆಚ್ಚದಲ್ಲಿ 10 ಮಿಲಿಯನ್​​ ಸ್ಪುಟ್ನಿಕ್​ ಲಸಿಕೆ: ಬಿಡ್​​ ಪಡೆದ ಮುಂಬೈ ಮುನ್ಸಿಪಲ್​​​​

ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಿಎಂ ತಮ್ಮ ಅಧಿಕೃತ ನಿವಾಸದಿಂದ ಹೊರಬಂದಿಲ್ಲ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದ್ದ ಕೆಸಿಆರ್ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ವಿಚಾರಿಸಿದರು. ಕೆಲ ರೋಗಿಗಳಿಂದ ಕೇಳಿ ಬಂದ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಂಧಿ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲಾಗಿರುವ ಆಕ್ಸಿಜನ್​ ಸ್ಥಾವರದ ಪರಿಶೀಲನೆ ನಡೆಸಿದರು. ಕೋವಿಡ್​ ಸಂದರ್ಭದಲ್ಲಿ ಕೆಲಸ ಮಾಡ್ತಿರುವ ವೈದ್ಯರು, ದಾದಿಯರು ಮತ್ತು ಕಿರಿಯ ವೈದ್ಯರಿಗೆ ಅಭಿನಂದನೆ ಸಲ್ಲಿಸಿದರು. ಸಿಎಂ ಜತೆ ಹಣಕಾಸು ಸಚಿವ ಟಿ. ಹರೀಶ್​ ರಾವ್​, ಮುಖ್ಯ ಕಾರ್ಯದರ್ಶಿ ಸೋಮೇಶ್​ ಕುಮಾರ್​ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ತೆಲಂಗಾಣದಲ್ಲಿ ಈಗಾಗಲೇ ಲಾಕ್​ಡೌನ್ ಜಾರಿಯಲ್ಲಿದ್ದು, ಮೇ ಅಂತ್ಯದವರೆಗೂ ವಿಸ್ತರಣೆ ಮಾಡಿ ನಿನ್ನೆ ಸಿಎಂ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details