ಹೈದರಾಬಾದ್ (ತೆಲಂಗಾಣ):2014ರಲ್ಲಿಚುನಾವಣೆ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ವಿರುದ್ಧ ತೆಲಂಗಾಣ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ.
ಈಗಾಗಲೇ ತೆಲಂಗಾಣದ ಕೊಡಾಡಾ ಪೊಲೀಸ್ ಠಾಣೆಯಲ್ಲಿ ಆಂಧ್ರ ಸಿಎಂ ವಿರುದ್ಧ ಪ್ರಕರಣ ದಾಖಲಾಗಿದೆ. 2014ರ ಚುನಾವಣೆ ಪ್ರಚಾರದ ವೇಳೆ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಅನಿಧಿಕೃತವಾಗಿ ರ‍್ಯಾಲಿ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.