ನವದೆಹಲಿ: ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀಕರ ರೂಪ ಪಡೆಯುತ್ತಿದೆ. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ನನ್ನ ಪ್ರಕಾರ ತೆಲಂಗಾಣದಲ್ಲಿರುವ ನಮ್ಮ ಸಹೋದರ ಸಹೋದರಿಯರು ಭಾರಿ ಪ್ರವಾಹವನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ಇನ್ನೂ ಹೆಚ್ಚಿನ ಮಳೆಯಾಗುವ ಎಚ್ಚರಿಕೆಗಳಿವೆ. ದಯವಿಟ್ಟು ಕಾಳಜಿವಹಿಸಿ ಸುರಕ್ಷಿತವಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.
ತೆಲಂಗಾಣದ ಹದಿರಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದು ಮುನ್ಸೂಚನೆ ನೀಡಿದೆ.