ಹೈದರಾಬಾದ್: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 10 ದಿನಗಳ ಕಾಲ ಲಾಕ್ಡೌನ್ ವಿಧಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ನಾಳೆಯಿಂದ 10 ದಿನಗಳವರೆಗೆ ತೆಲಂಗಾಣದಲ್ಲಿ ಲಾಕ್ಡೌನ್ ಜಾರಿ - ಸಿಎಂ ಕೆ.ಚಂದ್ರಶೇಖರ್ ರಾವ್
ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಾಳೆಯಿಂದ 10 ದಿನಗಳವರೆಗೆ ಲಾಕ್ಡೌನ್ ವಿಧಿಸಿ ಸಿಎಂ ಕೆಸಿಆರ್ ಆದೇಶಿಸಿದ್ದಾರೆ.
ಕೆಸಿಆರ್
ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 12 ರಿಂದ 22 ರವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದ್ದು, ನಾಳೆಯಿಂದ ನಿರ್ಬಂಧಗಳು ಅನ್ವಯವಾಗಲಿವೆ.
ಅಲ್ಲದೇ, ಸಂಪುಟ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ವ್ಯಾಕ್ಸಿನೇಷನ್ ಹೆಚ್ಚಿಸಲು, ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.