ಹೈದರಾಬಾದ್(ತೆಲಂಗಾಣ): ಕಳೆದ ಕೆಲ ದಿನಗಳ ಹಿಂದೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ಅಪ್ರಾಪ್ತೆ ಅತ್ಯಾಚಾರ ಪ್ರಕರಣ ಸಿಕ್ಕಾಪಟ್ಟೆ ಸದ್ದು ಮಾಡ್ತಿದ್ದು, ಇದರ ಬೆನ್ನಲ್ಲೇ ಪ್ರಕರಣದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುವಂತೆ ಗರ್ವನರ್ ಡಾ.ತಮಿಳಿಸೈ ಸೌಂದರರಾಜನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಸಂಪೂರ್ಣವಾದ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಕಳೆದ ತಿಂಗಳ 28ರಂದು ಇಬ್ಬರು ಸ್ನೇಹಿತರ ಜೊತೆ ಸೇರಿ ಬಾಲಕಿ ಜುಬಿಲಿ ಹಿಲ್ಸ್ ಪಬ್‌ಗೆ ತೆರಳಿದ್ದ ವೇಳೆ, ಪಬ್ನಲ್ಲಿ ಪರಿಚಯವಾಗಿರುವ ಇತರ ಕೆಲ ಸ್ನೇಹಿತರೊಂದಿಗೆ ಬಾಲಕಿ ಹೊರಗಡೆ ಬಂದಾಗ ಆಕೆಯ ಮೇಲೆ ಕಾರಿನಲ್ಲೇ ಅತ್ಯಾಚಾರವೆಸಗಿರುವ ಪ್ರಕರಣ ನಡೆದಿತ್ತು. ಇದು, ತೆಲಂಗಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಗವರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಜುಬಲಿ ಹಿಲ್ಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಅವರನ್ನ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ವರದಿ ಸಲ್ಲಿಕೆ ಮಾಡಲು ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಸೂಚನೆ ಕೊಟ್ಟಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ... ರಾಜಕೀಯ ಪಕ್ಷದ ಮುಖಂಡರ ಪುತ್ರ ಭಾಗಿ!?
ಏನಿದು ಅತ್ಯಾಚಾರ ಪ್ರಕರಣ?:ಹೈದರಾಬಾದ್‌ನಲ್ಲಿ ಪಾರ್ಟಿಗೋಸ್ಕರ ಪಬ್‌ಗೆ ತೆರಳಿದ್ದ 17 ವರ್ಷದ ಬಾಲಕಿಯೊಬ್ಬರ ಮೇಲೆ ಮರ್ಸಿಡಿಸ್ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಬಾಲಕಿ ತನ್ನ ಸ್ನೇಹಿತರೊಂದಿಗೆ ಪಬ್‌ನಿಂದ ಹೊರಹೋಗುತ್ತಿದ್ದ ದೃಶ್ಯ ಸೆರೆಯಾಗಿದ್ದವು. ಈ ಪ್ರಕರಣದಲ್ಲಿ ತೆಲಂಗಾಣದ ಪ್ರಭಾವಿ ರಾಜಕಾರಣಿಗಳ ಮಕ್ಕಳು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚು ಗಮನ ಸೆಳೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೂಡ ಓರ್ವ ಆರೋಪಿಯ ಬಂಧನ ಮಾಡಲಾಗಿದ್ದು, ಎಲ್ಲ ಕಾಮುಕರು ಅರೆಸ್ಟ್ ಆದಂತಾಗಿದೆ.