ಹೈದರಾಬಾದ್:ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಿ ತೆಲಂಗಾಣ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಪಟಾಕಿ ಮಾರಾಟ ಸಂಪೂರ್ಣ ನಿಷೇಧ: ತೆಲಂಗಾಣ ಹೈಕೋರ್ಟ್ ಮಹತ್ವದ ಆದೇಶ - ತೆಲಂಗಾಣ ಹೈಕೋರ್ಟ್ ಲೇಟೆಸ್ಟ್ ನ್ಯೂಸ್
ಪಟಾಕಿ ಮಾರಾಟವನ್ನು ನಿಷೇಧಿಸುವಂತೆ ತೆಲಂಗಾಣ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಪಟಾಕಿಗಳನ್ನು ಖರೀದಿಸದಂತೆ ಸಾರ್ವಜನಿಕರಿಗೆ ಹೇಳಿದೆ.
ರಾಜ್ಯದಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧ
ಚಂದ್ರ ಪ್ರಕಾಶ್ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್, ಪಟಾಕಿ ಮಾರಾಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಪಟಾಕಿಗಳನ್ನು ಖರೀದಿಸದಂತೆ ಸಾರ್ವಜನಿಕರಿಗೆ ಹೇಳಿದೆ. ಅಲ್ಲದೆ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಹಿರಿಯ ವಕೀಲ ಮಾಚಾರ್ಲಾ ರಂಗಯ್ಯ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ನವೆಂಬರ್ 19 ರಂದು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ವಕೀಲರು ಹೇಳಿದ್ದಾರೆ.