ಹೈದರಾಬಾದ್:ತೆಲಂಗಾಣ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಜನರ ಅಭಿವೃದ್ಧಿಗೆ ಅನುಕೂಲವಾಗುವಂತಹ ಯೋಜನೆ ಜಾರಿಗೊಳಿಸಿದೆ. ಸರ್ಕಾರಿ ಉದ್ಯೋಗ ಹಾಗು ಶಿಕ್ಷಣದಲ್ಲಿ ಮಹಿಳೆಯರಿಗೆ ಶೇ 33.3ರಷ್ಟು ಮೀಸಲಾತಿ ಹಾಗು ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದೆ. ಈ ಯೋಜನೆ ಎಂಟು ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಜನರಿಗೆ ನೆರವಾಗಲಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಘೋಷಿಸಿದೆ. ತಹಶೀಲ್ದಾರ್ (ಎಂಆರ್‌ಒ) ನೀಡಿದ ಆದಾಯ ಪ್ರಮಾಣಪತ್ರವನ್ನು ಆಧರಿಸಿ ಇಡಬ್ಲ್ಯೂಎಸ್ ಕೋಟಾ ಇರುತ್ತದೆ. ಸುಳ್ಳು ದಾಖಲೆಗಳು ಕಂಡುಬಂದಲ್ಲಿ ಅಂತಹ ಅರ್ಜಿಗಳನ್ನು ವಜಾಗೊಳಿಸಲಾಗುತ್ತದೆ. ಜೊತೆಗೆ ಕಾನೂನು ಕ್ರಮಗಳನ್ನು ಸಹ ತಕ್ಷಣವೇ ತೆಗೆದುಕೊಳ್ಳಲಾಗುವುದು ಎಂದು ಮಾರ್ಗಸೂಚಿಯಲ್ಲಿ ಎಚ್ಚರಿಸಲಾಗಿದೆ.