ಹೈದರಾಬಾದ್:ತೆಲಂಗಾಣದಲ್ಲಿ ಕಳೆದ 24 ಗಂಟೆಗಳಲ್ಲಿ 3,307 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 3.38 ಲಕ್ಷಕ್ಕೂ ಅಧಿಕವಾಗಿದೆ ಎಂದು ವರದಿಯಾಗಿದೆ.
ಇದೇ ಅವಧಿಯಲ್ಲಿ 8 ಸೋಂಕಿತರು ಸಾವನ್ನಪ್ಪಿದ್ದಾರೆ. ಇಲ್ಲಿಯತನಕ ಮೃತರ ಸಂಖ್ಯೆ 1,788ಕ್ಕೆ ತಲುಪಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ವ್ಯಾಪ್ತಿಯಲ್ಲಿ 446 ಪ್ರಕರಣಗಳು ಪತ್ತೆಯಾಗಿವೆ. ನಂತರದ ಸ್ಥಾನಗಳಲ್ಲಿ ಮಲ್ಕಜ್‌ಗಿರಿ (314) ಮತ್ತು ನಿಜಾಮಾಬಾದ್ (279) ಪ್ರಕರಣಗಳು ದೃಢಪಟ್ಟಿವೆ.
ಇದನ್ನೂ ಓದಿ: ಆಮ್ಲಜನಕ ಸಂಪರ್ಕ ಕಡಿತಗೊಳಿಸಿದ ವಾರ್ಡ್ ಬಾಯ್: ಕೆಲವೇ ಕ್ಷಣಗಳಲ್ಲಿ ಕೊರೊನಾ ರೋಗಿ ಸಾವು
ರಾಜ್ಯದಲ್ಲಿ 21.35 ಲಕ್ಷಕ್ಕೂ ಹೆಚ್ಚು ಜನರು ಮೊದಲ ಕೋವಿಡ್ ಲಸಿಕೆಯ ಡೋಸ್ ಪಡೆದಿದ್ದಾರೆ. ಏಪ್ರಿಲ್ 14ರ ವೇಳೆಗೆ 3.22 ಲಕ್ಷಕ್ಕೂ ಹೆಚ್ಚು ಜನರು ಎರಡನೇ ಡೋಸ್ ಸ್ವೀಕರಿಸಿದ್ದಾರೆ.