ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ಮತ್ತು ಸಚಿವ ಕೆ ಟಿ ರಾಮರಾವ್ ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಬಂಧ ಕೇಂದ್ರದ ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತೋಣ ಎಂದು ಅವರು ಕರೆ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿ ಕುರಿತು ಮಾತನಾಡಿದ ಕೆಟಿಆರ್, ನರೇಂದ್ರ ಮೋದಿ ಪ್ರಧಾನಿಯಾದ ನಂತರ, ಅವರ ಪಕ್ಷವು ಕನಿಷ್ಠ ಎಂಟು ಸರ್ಕಾರಗಳನ್ನು ಉರುಳಿಸಿದೆ. ಜನಾದೇಶವನ್ನು ಸಹ ಪಡೆಯದೆ ಬಲವಂತವಾಗಿ ತಮ್ಮದೇ ಆದ ಸರ್ಕಾರವನ್ನು ರಚಿಸಿದೆ ಎಂದು ಹರಿಹಾಯ್ದರು.