ಶ್ರೀಕಾಕುಳಂ:ಆಂಧ್ರಪ್ರದೇಶದ ರಾಜಂ ಪಟ್ಟಣದಲ್ಲಿರುವ ನಿವಾಸದಲ್ಲಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಮತ್ತು ಮಾಜಿ ಸಚಿವ ಕಿಮಿಡಿ ಕಲಾ ವೆಂಕಟರಾವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 2 ರಂದು ರಾಮತೀರ್ಥಂನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟರಾವ್ರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ವೆಂಕಟರಾವ್ ಅವರನ್ನು ವಿಜಯನಗರಂ ಜಿಲ್ಲೆಯ ನೆಲ್ಲಿಮಾರ್ಲಾ ಪೊಲೀಸರು ಚಿಪುರುಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ರಾಮನ ವಿಗ್ರಹವನ್ನು ಅಪವಿತ್ರಗೊಳಿಸಲಾಗಿರುವ ಹಿನ್ನೆಲೆ ಜನವರಿ 2ರಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ವೈಎಸ್ಆರ್ಸಿಪಿ ಸಂಸದ ವಿಜಯಸಾಯಿ ರೆಡ್ಡಿ ರಾಮತೀರ್ಥಂನಲ್ಲಿರುವ ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು.