ಹೈದರಾಬಾದ್(ತೆಲಂಗಾಣ): ತೆಲಗು ಕಿರುತೆರೆ ನಟಿ ರಾತ್ರಿ ವೇಳೆ ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್ ಸವಾರನೋರ್ವನಿಗೆ ಡಿಕ್ಕಿ ಹೊಡೆದಿರುವ ಘಟನೆ ಹೈದರಾಬಾದ್ನ ಶಂಶಾಬಾದ್ ಏರ್ಪೋರ್ಟ್ ರೋಡ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಶೂಟಿಂಗ್ನಲ್ಲಿ ಭಾಗಿಯಾಗಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ಸವಾರ ಬಾಸ್ಕರ್ಗೆ ನಟಿ ಲಹರಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರ ಬೆನ್ನಲ್ಲೇ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.